newsics.com
ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಜನವರಿ ಹತ್ತರಂದೇ ಜಿಲ್ಲಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ನ್ಯಾಯಾಲಯದ ಪರಿಶೀಲನೆಯ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಮುರುಘಾ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೊ ಕಾಯ್ದೆಯಡಿ ಅ.13ರಂದು ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಗ್ರಾಮಾಂತರ ಠಾಣೆಯ ಪೊಲೀಸರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.
ಮೊದಲ ಪ್ರಕರಣದ ದೋಷಾರೋಪ ಪಟ್ಟಿ ಸೋರಿಕೆ ಆಗಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು.
ಮದುವೆ ಪ್ರಸ್ತಾಪ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಮೆರಿಕದ ಐಟಿ ಪರಿಣಿತರಿಗೆ ಕುಸಿದ ಬೇಡಿಕೆ