Saturday, April 17, 2021

ಸಿ.ಆರ್. ಸಿಂಹ ಪತ್ನಿ ಶಾರದಾ ಸಿಂಹ ಇನ್ನಿಲ್ಲ

newsics.com
ಬೆಂಗಳೂರು: ಹಿರಿಯ ರಂಗಕರ್ಮಿ ದಿವಂಗತ ಸಿ.ಆರ್.ಸಿಂಹ ಅವರ ಪತ್ನಿ ಶಾರದಾ ಸಿಂಹ (73) ಹೃದಯಾಘಾತದಿಂದ ನಿಧನರಾದರು.
ವಯೋಸಹಜ ಅಸ್ವಸ್ಥತೆಯಿಂದ ಬಳಲಿದ್ದ ಅವರಿಗೆ ಮೂರು ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದರು.
ರಂಗಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶಾರದಾ ಸಿಂಹ ಅವರು, ವೇದಿಕೆ ಫೌಂಡೇಷನ್ ಸ್ಥಾಪಿಸಿ ಆ ಮೂಲಕ ಹಲವು ಚಟುವಟಿಕೆಗಳನ್ನು ನಡೆಸುತ್ತಿದ್ದರು. ವೇದಿಕೆ ಮತ್ತು ನಟರಂಗ ಕಂಪನಿಯ 60ಕ್ಕೂ ಹೆಚ್ಚು ನಾಟಕಗಳಲ್ಲಿ ಇವರು ನಟಿಸಿದ್ದರು.
ರಂಗಸಜ್ಜಿಕೆ, ವಸ್ತ್ರವಿನ್ಯಾಸ, ಸಂಘಟನೆ ಸೇರಿದಂತೆ ರಂಗಭೂಮಿಯಲ್ಲಿ ಶಾರದಾ ಸಿಂಹ ತೊಡಗಿಸಿಕೊಂಡಿದ್ದರು.
ಶಾರದಾ ಸಿಂಹ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ‌ ಲಿಂಬಾವಳಿ ಕಂಬನಿ ಮಿಡಿದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!