Monday, July 4, 2022

ಕನ್ನಡ ಚಿತ್ರರಂಗ ಬಿಕ್ಕಟ್ಟು: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಭೆ

Follow Us

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚಿತ್ರರಂಗದ ಗಣ್ಯರು ಇಂದು ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗಂಭೀರ ಚರ್ಚೆ ನಡೆಸಿದರು. ಚಲನಚಿತ್ರ ಕ್ಷೇತ್ರದ ಎಲ್ಲ ವಿಭಾಗಗಳ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಿದರು.

ಶಿವರಾಜ್ ಕುಮಾರ್ ಅವರ  ನಿವಾಸದಲ್ಲಿ ನಡೆದ ಸಭೆಯಲ್ಲಿ  ಸಾ ರಾ ಗೋವಿಂದು, ಉಮೇಶ್ ಬಣಕಾರ್, ಸಾಧು ಕೋಕಿಲ ಸೇರಿದಂತೆ ಹಲವು ಗಣ್ಯರು ತಮ್ಮ ಅನಿಸಿಕೆ , ಅಭಿಪ್ರಾಯ ವ್ಯಕ್ತಪಡಿಸಿದರು. ಚಿತ್ರಮಂದಿರಗಳು ಕೊರೋನಾದಿಂದಾಗಿ ಮುಚ್ಚಿವೆ. ಚಿತ್ರೀಕರಣ ಸ್ಥಗಿತಗೊಂಡಿದೆ. ಇದರಿಂದ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಎಂಬ ಆತಂಕವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.

ಮಾತುಕತೆ ಪೂರ್ಣಗೊಂಡ ಬಳಿಕ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸುವ ಸಾಧ್ಯತೆಗಳಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!