ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ರೌಡಿ ಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮೈಕ್ರೋ ಲೇ ಔಟ್ ನ ರಂಕಾ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದೆ. ರೌಡಿ ಶೀಟರ್ ಗಳಾದ ಹಂದಿ ಮಹೇಶ್ ಮತ್ತು ಸತೀಶ್ ವಿರುದ್ಧ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮ ರಕ್ಷಣೆಗಾಗಿ ಸಿಸಿಬಿ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಬ್ಬರು ರೌಡಿ ಶೀಟರ್ ಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.