ಬೆಂಗಳೂರು: ತಮಗೆ ಪಕ್ಷದ ಜವಾಬ್ದಾರಿ ನೀಡುವುದಾದರೆ ತಮ್ಮನ್ನೇ ಸಿಎಂ ಅಭ್ಯರ್ಥಿಯನ್ನಾಗಿ ಪರಿಗಣಿಸಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಷರತ್ತು ಹಾಕಿದ್ದಾರೆ.
ಎಐಸಿಸಿ ಮಟ್ಟದಲ್ಲಿ ಈಗ ಶಿವಕುಮಾರ್ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ. ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಸೂಚನೆ ಮೇರೆಗೆ ಶಿವಕುಮಾರ್ ಜತೆ ಕೆ.ಸಿ.ವೇಣುಗೋಪಾಲ್ ಗುರುವಾರ ದೂರವಾಣಿ ಮೂಲಕ ಚರ್ಚೆ ನಡೆಸಿದರು. ಆಗ ತಮ್ಮನ್ನೇ ಸಿಎಂ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಸಾಂಪ್ರದಾಯಿಕವಾಗಿ ಪಕ್ಷದ ಅಧ್ಯಕ್ಷರಾದವರೇ ಮುಖ್ಯಮಂತ್ರಿ ಆಗಬೇಕು. ಹಾಗಾಗಿ ಈ ವಿಚಾರದ ಬಗ್ಗೆ ಪಕ್ಷದ ವರಿಷ್ಠರು ಗಮನಹರಿಸಬೇಕು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದರೆನ್ನಲಾಗಿದೆ.
ಆದರೆ, ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಲ್ಲಿ ಐದು ನಿಮಿಷಕ್ಕೊಮ್ಮೆ ಟೋಪಿ ಬದಲಾಗುತ್ತದೆ. ಪಕ್ಷದಲ್ಲಿ ಬ್ಲಾಕ್ ಮೇಲ್, ಷರತ್ತುಗಳಿಗೆ ಆಸ್ಪದವಿಲ್ಲ. ಇಂತಹ ಯಾವುದೇ ಒತ್ತಡದ ರಾಜಕೀಯ ಕಾಂಗ್ರೆಸ್ ನಲ್ಲಿ ನಡೆಯುವುದಿಲ್ಲ ಎಂದು ಹೇಳಿದರು.
ನಾನೇ ಸಿಎಂ ಅಭ್ಯರ್ಥಿಯಾಗಬೇಕು- ಹೈಕಮಾಂಡ್ ಬಳಿ ಡಿಕೆಶಿ ಷರತ್ತು?
Follow Us