Tuesday, April 13, 2021

‘ಮನ್ ಕಿ ಬಾತ್’ ಕಾಮೇಗೌಡರಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಮಂಡ್ಯ: ‘ಮನ್ ಕಿ ಬಾತ್’ನ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಕಾಮೇಗೌಡರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕಾಮೇಗೌಡರ ಬಲಗಾಲಿನಲ್ಲಿ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಳವಳ್ಳಿ ತಾಲ್ಲೂಕು ಆಸ್ಪತ್ರೆಗೆ ಗುರುವಾರ ಸಂಜೆ ದಾಖಲಾಗಿದ್ದಾರೆ.
ಅನಾರೋಗ್ಯದಿಂದ ಕಾಮೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಪಿ.ಮಂಚೇಗೌಡ, ತಾಲ್ಲೂಕು ತಹಸೀಲ್ದಾರ್, ಇಓ ಸೇರಿದಂತೆ ಹಲವು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಕಾಮೇಗೌಡರ ಆರೋಗ್ಯ ವಿಚಾರಿಸಿದರು.
ಅಗತ್ಯಬಿದ್ದರೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಉತ್ತಮ ಚಿಕಿತ್ಸೆ ಕೊಡಿಸುವುದಕ್ಕೂ ಚಿಂತನೆ ನಡೆಸಲಾಗಿದೆ.
ಕಾಮೇಗೌಡರು ಕುರಿ ಕಾಯುತ್ತಲೇ ಸ್ವಂತ ಹಣದಿಂದ ಸುಮಾರು 16 ಕೆರೆ ನಿರ್ಮಿಸುವ ಮೂಲಕ ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ನಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿದ ಬಳಿಕ ಅಭಿನಂದನೆಯ ಮಹಾಪೂರವೇ ಹರಿದುಬಂದಿತ್ತು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!