Wednesday, October 5, 2022

ಸಿದ್ದರಾಮಯ್ಯ, ತೇಜಸ್ವಿ ಸೂರ್ಯ, ನಟ ದರ್ಶನ್’ಗೆ ತಲಾ 250 ರೂ. ದಂಡ

Follow Us

newsics.com
ಬೆಂಗಳೂರು: ಕೊರೋನಾ ಸೋಂಕಿನ ಮಾರ್ಗಸೂಚಿ ನಿಯಮಗಳನ್ನು ಉಪ ಚುನಾವಣೆ ಸಂದರ್ಭದಲ್ಲಿ ಉಲ್ಲಂಘಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ ಹಾಗೂ ನಟ ದರ್ಶನ್ ಅವರಿಗೆ ತಲಾ 250 ರೂ. ದಂಡ ವಿಧಿಸಿ, ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.
ರಾಜರಾಜೇಶ್ವರಿನಗರ ಉಪ ಚುನಾವಣೆಯ ಪ್ರಚಾರದ ವೇಳೆ ಮಾರ್ಗಸೂಚಿ ನಿಯಮ ಉಲ್ಲಂಘಿಸಿಲಾಗಿದೆ. ಮಾರ್ಗಸೂಚಿ ನಿಯಮ ಉಲ್ಲಂಘಿಸಿದ್ದರ ಬಗ್ಗೆ 18 ಎನ್ ಸಿ ಆರ್ ದಾಖಲಾಗಿದೆ ಎಂಬುದಾಗಿ ವಕೀಲರಾದ ಪುತ್ತಿಗೆ ರಮೇಶ್, ಜಿ.ಆರ್. ಮೋಹನ್ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಪಿಐಎಲ್ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ನಟ ದರ್ಶನ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದ ಡಿಕೆ ಸುರೇಶ್ ಅವರಿಗೆ ತಲಾ 250 ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ಅರ್ಜಿಯ ವಿಚಾರಣೆಯನ್ನು ನವೆಂಬರ್ 11ಕ್ಕೆ ಹೈಕೋರ್ಟ್ ಮುಂದೂಡಿದೆ.

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಪ್ರೀತಿಸಿದವನಿಗಾಗಿ ಬ್ಯಾನರ್ ಏರಿ ಕುಳಿತ ಬಾಲಕಿ!

ಲ್ಯಾಪ್ ಟಾಪ್ ಕೊಡಿಸದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಟ್ರಕ್‍ಗೆ ಜೀಪ್ ಡಿಕ್ಕಿ; ಒಂದೇ ಕುಟುಂಬದ 7 ಮಂದಿ ಸಾವು, ಐವರ ಸ್ಥಿತಿ ಗಂಭೀರ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!