newsics.com
ನವದೆಹಲಿ: ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೀಡಿದ ಆಮಂತ್ರಣವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮಾತ್ರ ಆಸಕ್ತಿ. ದೆಹಲಿ ರಾಜಕೀಯದಿಂದ ಬಲು ದೂರ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ಎರಡು ಅಧಿಕಾರ ಕೇಂದ್ರ ಸೃಷ್ಟಿಯಾಗುವುದನ್ನು ತಪ್ಪಿಸಲು ಕಾಂಗ್ರೆಸ್ ಹೈಕಮಾಂಡ್ ಈ ಚಿಂತನೆ ನಡೆಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೂಡ ಈ ಸಂಬಂಧ ಮನವಿ ಮಾಡಿದ್ದರು ಎಂದು ವರದಿಯಾಗಿದೆ.
ಹಲವು ಶಾಸಕರು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಬಹಿರಂಗ ಹೇಳಿಕೆ ನೀಡುತ್ತಿರುವುದು ಕಾಂಗ್ರೆಸ್ ನ ಒಂದು ಬಣದ ಅಸಮಾಧಾನಕ್ಕೆ ಕಾರಣವಾಗಿದೆ.