ಬೆಂಗಳೂರು: ಸ್ಮಾರ್ಟ್ ಸಿಟಿ ನಿಧಿಯ ಸಮರ್ಪಕ ಬಳಕೆ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವ ಮುನ್ನ ಬೆಂಗಳೂರು ಸಂಸದ ಪಿ ಸಿ ಮೋಹನ್ ಮುಂಜಾನೆ ಕಬ್ಬನ್ ಪಾರ್ಕ್ ಗೆ ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ ತಿಳಿದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಈ ಸಂಬಂಧ ಟ್ವಿಟರ್ ಖಾತೆಯಲ್ಲಿ ಪೋಟೋ ಶೇರ್ ಮಾಡಿರುವ ಪಿ ಸಿ ಮೋಹನ್, ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಹೇಳಿದ್ದಾರೆ.