Tuesday, August 9, 2022

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

Follow Us

newsics.com
ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ.
ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್ ಪಕ್ಷದ ವಕ್ತಾರ ಹುದ್ದೆಯೂ ಸಿಗಲಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೃಷ್ಣ, ರಾಜ್ಯ ಘಟಕದ ಅಧ್ಯಕ್ಷ ಮೊಹಮದ್ ನಲಪಾಡ್ ಹ್ಯಾರಿಸ್ ಈ ಮಾಹಿತಿ ನೀಡಿದ್ದಾರೆ.
ರಾಜ್ಯದ ಯುವಕರಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ಇಲ್ಲವಾಗಿದೆ. ಹೀಗಾಗಿ ನಾವು ಇಂತಹ ವೇದಿಕೆ ನೀಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ರಾಜ್ಯಮಟ್ಟದಲ್ಲಿ ಗೆದ್ದವರಿಗೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಶ್ರೀನಿವಾಸ್ ತಿಳಿಸಿದರು.
ಮೊದಲು ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ನಡೆಸಲಾಗುವುದು. ಅಲ್ಲಿ ಆಯ್ಕೆಯಾದ ಪ್ರಮುಖ ಅಭ್ಯರ್ಥಿಗಳಿಗೆ ಜೂನ್ 18ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಸಲಾಗುವುದು. ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ವಿಜೇತರಾಗುವವರಿಗೆ ಮೊದಲ ಬಹುಮಾನ ಐ ಫೋನ್ 13 ಪ್ರೊ, ಎರಡನೇ ಬಹುಮಾನವಾಗಿ ಐ ಫೋನ್ 13 ಹಾಗೂ ಮೂರನೇ ಬಹುಮಾನವಾಗಿ ಒನ್ ಪ್ಲಸ್ ಫೋನ್ ನೀಡಲಾಗುವುದು. ಜತೆಗೆ ಉತ್ತಮ ಭಾಷಣ ಮಾಡುವ 10 ಮಂದಿಯನ್ನು ಯುವ ಕಾಂಗ್ರೆಸ್ ವಕ್ತಾರರನ್ನಾಗಿ ನೇಮಕ ಮಾಡಲಾಗುವುದು ಎಂದು ನಲಪಾಡ್ ವಿವರಿಸಿದರು.

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

ಮತ್ತೆ ಚಿನ್ನ, ಬೆಳ್ಳಿ ದುಬಾರಿ

ಮತ್ತಷ್ಟು ಸುದ್ದಿಗಳು

vertical

Latest News

ಮದ್ವೆಗೆ ಬನ್ನಿ, ಹೊಟ್ಟೆ ತುಂಬಾ ತಿನ್ನಿ, ಬಿಲ್ ಪೇ ಮಾಡಿ!

newsics.com ಸಂಗೀತ, ಮದ್ವೆ, ಔತಣಕೂಟ ಎಂದು ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತೆ. ಮದುವೆಗಳಲ್ಲಿ ಹಲವು ಬಗೆಯ ಆಹಾರ ಪದಾರ್ಥಗಳನ್ನು ಮಾಡಿ ಬಂಧು ಮಿತ್ರರನ್ನು ಕರೆಸಿ ಊಟ ಹಾಕುವುದು...

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...
- Advertisement -
error: Content is protected !!