newsics.com
ಮೈಸೂರು: ವಿದ್ಯಾರ್ಥಿಯೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದ್ದು, ಸಂಜಯ್ ಎಂಬಾತ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ನಿನ್ನೆಯ ಪರೀಕ್ಷೆ ಫಲಿತಾಂಶದಲ್ಲಿ ಇಂಗ್ಲೀಷ್, ಸಮಾಜ, ವಿಜ್ಞಾನದಲ್ಲಿ ಅನುತ್ತೀರ್ಣಗೊಂಡಿದ್ದು, ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ಹುಣಸೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.