Monday, April 12, 2021

ಆಗಸ್ಟ್ ಮೊದಲ ವಾರ ಎಸ್ ಎಸ್ ಎಲ್ ಸಿ ಫಲಿತಾಂಶ

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಆಗಸ್ಟ್ ಮೊದಲ ವಾರ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ. ವಿವಾದಗಳ ಸರಮಾಲೆ ಮಧ್ಯೆ ರಾಜ್ಯದಲ್ಲಿ ಎಸ್ ಎಸ್ ಎಲ್  ಸಿ ಪರೀಕ್ಷೆ ಮುಂದುವರಿದಿದೆ.  ಹಲವು ರಾಜ್ಯಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದುಪಡಿಸಿದ್ದರೂ ರಾಜ್ಯದಲ್ಲಿ ಪರೀಕ್ಷಾ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇದೇ ವೇಳೆ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಸೇರಿದಂತೆ ಹಲವು ಆರೋಪಗಳಿಗೆ ಸಂಬಂಧಿಸಿ 450 ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ಮಾಹಿತಿ  ನೀಡಿದ್ದಾರೆ. ಎಲ್ ಕೆ ಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಬೇಡ ಎಂದು ಸುರೇಶ್ ಕುಮಾರ್ ಪುನರುಚ್ಚರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!