newsics.com
ಬೆಂಗಳೂರು: ಸೆಪ್ಟೆಂಬರ್ ನಲ್ಲಿ ನಡೆಸಲಾಗಿದ್ದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 2021ರಲ್ಲಿ ನಡೆದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಅಕ್ಟೋಬರ್ 11ರ ನಾಳೆ ಬೆಳಿಗ್ಗೆ 10 ಗಂಟೆಗೆ ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.