Saturday, April 17, 2021

ಇಂದು ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ

ಬೆಂಗಳೂರು:  ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಪ್ರಸಕ್ತ ಪರಿಸ್ಥಿತಿ ಕುರಿತು ಸಚಿವ ಸಂಪುಟ ಸಭೆ ಪರಾಮರ್ಶೆ ನಡೆಸಲಿದೆ. ಸಾರಿಗೆ ಸೇವೆ ಆರಂಭ, ಶ್ರಮಿಕರಿಗೆ ವಿಶೇಷ ಸೌಲಭ್ಯ , ನಿರ್ಬಂಧಿತ ವಲಯಗಳಲ್ಲಿ ರೋಗ ತಡೆಗೆ ಅನುಸರಿಸಬೇಕಾದ ಕಠಿಣ ಕ್ರಮ ಮತ್ತು ಹೊರ ರಾಜ್ಯಗಳಿಂದ ಬರುವ ಜನರ ಮೇಲೆ ಯಾವ ರೀತಿ ನಿಗಾ ವಹಿಸಬೇಕು ಎಂಬ ಬಗ್ಗೆ ಕೂಡ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಲಾಕ್ ಡೌನ್ ನ ನಾಲ್ಕನೆ ಹಂತದ ಸ್ವರೂಪದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಮೊದಲ ಆದ್ಯತೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆಗಳನ್ನು ರಾಜ್ಯ ಸರ್ಕಾರ ಪಾಲಿಸಲಿದೆ. ಲಾಕ್ ಡೌನ್ ನಿಂದ ರಾಜ್ಯದ ಖಜಾನೆ ಖಾಲಿಯಾಗಿದ್ದು, ಆರ್ಥಿಕ ಚಟುವಟಿಕೆಗಳ ವೇಗ ಹೆಚ್ಚಿಸಲು ಹಲವು ಕ್ರಮಗಳನ್ನು ಇಂದು ಘೋಷಿಸುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!