newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,14,365 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 406 ಮಂದಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,81,027ಕ್ಕೆ ಏರಿಕೆಯಾಗಿದೆ.
ಇಂದು 637 ಮಂದಿ ಗುಣಮುಖರಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 29,32,959ಕ್ಕೆ ಏರಿದೆ. ಇಂದು ಸೋಂಕಿಗೆ 10 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 37,885ಕ್ಕೆ ಏರಿಕೆಯಾಗಿದೆ.
10,154 ಪ್ರಕರಣಗಳು ಸಕ್ರಿಯವಾಗಿದ್ದು, ಪಾಸಿಟಿವಿಟಿ ದರ ಶೇಕಡಾ 0.35ರಷ್ಟಿದೆ.