ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 397 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ.
603 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,30,867ಕ್ಕೆ ಏರಿಕೆಯಾಗಿದೆ.
ಇಂದು 5 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 37,866ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 11,408 ಸಕ್ರಿಯ ಪ್ರಕರಣಗಳಿವೆ.