ಬೆಂಗಳೂರು: ನಗರದ ಕೆ.ಆರ್. ಮಾರುಕಟ್ಟೆ, ಕಲಾಸಿಪಾಳ್ಯ ಸೀಲ್ ಡೌನ್ ಇನ್ನೂ ಒಂದು ತಿಂಗಳು ಮುಂದುವರಿಕೆ ಮಾಡಲು ಬಿಬಿಎಂಪಿ ನಿರ್ಧರಿಸಿದೆ.
ಈ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಕೊರೋನಾ ಸೋಂಕು ಹರಡುತ್ತಿರುವುದರಿಂದ, ಕೆ.ಆರ್. ಮಾರ್ಕೆಟ್ ಮತ್ತು ಕಲಾಸಿಪಾಳ್ಯದಲ್ಲಿ ಸೀಲ್ ಡೌನ್ ಅವಧಿ ಶುಕ್ರವಾರ ಕೊನೆಗೊಳ್ಳಬೇಕಿತ್ತು.
ಈ ಹಿನ್ನೆಲೆಯಲ್ಲಿ ಆ.31 ರವರೆಗೆ ಮುಂದುವರೆಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.
ಚಿಕ್ಕಪೇಟೆ ಮತ್ತು ಅದರ ಸುತ್ತಮುತ್ತಲ ವಾಣಿಜ್ಯ ಮಳಿಗೆಗಳ ವ್ಯಾಪಾರ ವಹಿವಾಟಿಗೆ ನೀಡಲಾಗಿರುವ ಅವಕಾಶದ ಕುರಿತು ಆಯುಕ್ತರು ಯಾವುದೇ ಮಾಹಿತಿ ನೀಡಿಲ್ಲ. ಈ ಹಿಂದೆ ಚಿಕ್ಕಪೇಟೆ ವರ್ತಕರು ಬಿಬಿಎಂಪಿ ಬಳಿ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಇಲ್ಲಿ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಲಾಗಿತ್ತು. ಬಳಿಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದರಿಂದ ಈ ಪ್ರದೇಶಗಳನ್ನೂ ಸೀಲ್ ಡೌನ್ ಮಾಡಲಾಗಿತ್ತು.
ಇನ್ನೂ 1 ತಿಂಗಳ ಕಾಲ ಕೆ.ಆರ್. ಮಾರುಕಟ್ಟೆ, ಕಲಾಸಿಪಾಳ್ಯ ಸೀಲ್ ಡೌನ್
Follow Us