newsics.com
ಬೆಳಗಾವಿ: ಬಿಕಾಂ ಪದವಿ ವಿದ್ಯಾರ್ಥಿನಿಯೋರ್ವರು 30 ಗುಂಟೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದು 8 ಲಕ್ಷ ಆದಾಯ ಗಳಿಸಿದ್ದಾರೆ.
ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದ ನಿವಾಸಿ. ನಿಕಿತಾ ತಂದೆ ವೈಜು ಪಾಟೀಲ್ 4 ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಾ ಮಗಳನ್ನು ಚೆನ್ನಾಗಿ ಓದಿಸಿ ಒಳ್ಳೆಯ ಕೆಲಸಕ್ಕೆ ಸೇರಿಸಬೇಕೆಂಬ ಕನಸು ಕಂಡಿದ್ದರು. ಬಿ.ಕಾಂ ಪದವೀಧರೆಯಾಗಿದ್ದ ನಿಕಿತಾ ಪಾಟೀಲ್ ಸಿಎ ವ್ಯಾಸಂಗ ಮಾಡುತ್ತಿದ್ದಳು.
ಆ ಕಳೆದ ವರ್ಷ ನಿಕಿತಾಳ ತಂದೆ ವೈಜು ಪಾಟೀಲ್ ನಿಧನ ಹೊಂದುತ್ತಾರೆ. ಇದಾದ ಬಳಿಕ ದಿಕ್ಕೇ ತೋಚದಂತಾದ ಕುಟುಂಬಕ್ಕೆ ಆಸರೆಯಾಗಿದ್ದು ನಿಕಿತಾ ಪಾಟೀಲ್. ನಿಕಿತಾಳ ಚಿಕ್ಕಪ್ಪ ತಾನಾಜಿ ಸಹಾಯದೊಂದಿಗೆ ಕೃಷಿ ಕಾಯಕದಲ್ಲಿ ತೊಡಗಿ ನಾಲ್ಕು ಎಕರೆ ಜಮೀನಿನ ಪೈಕಿ ಮೂವತ್ತು ಗುಂಟೆಯಲ್ಲಿ ಮೆಣಸಿನಕಾಯಿ ಬೆಳೆದಿದ್ದಾಳೆ. ನವಲ ಭಟಕಾ ಎಂಬ ತಳಿಯ ಮೆಣಸಿನ ಬೀಜವನ್ನು ತಾವೇ ಸ್ವತಃ ಬಿತ್ತಿ ಸಸಿ ಮಾಡಿ 30 ಗುಂಟೆಯಲ್ಲಿ ನಾಟಿ ಮಾಡಿದ್ದಾರೆ. ಹನಿ ನೀರಾವರಿ ಪದ್ಧತಿ ಸೇರಿ ಸುಧಾರಿತ ಬೇಸಾಯ ಕ್ರಮ ಅನುಸರಿಸಿ ವ್ಯವಸಾಯ ಮಾಡುತ್ತಾ ಬಂದಿದ್ದು ಕಳೆದ ಆರು ತಿಂಗಳಲ್ಲಿ ಎಂಟು ಲಕ್ಷ ರೂಪಾಯಿ ಸಂಪಾದನೆ ಮಾಡಿದ್ದಾಳೆ.
ಮೆಣಸಿನಕಾಯಿಯನ್ನು ಮಹಾರಾಷ್ಟ್ರದ ಕೊಲ್ಲಾಪುರ, ಗೋವಾಗೆ ಅತಿ ಹೆಚ್ಚು ಸರಬರಾಜು ಮಾಡಲಾಗುತ್ತೆ.