Wednesday, October 5, 2022

ಒಂದೇ ಕಂತಲ್ಲಿ ಶುಲ್ಕ ಪಾವತಿಸದ್ದಕ್ಕೆ ಆನ್‌ಲೈನ್ ಕ್ಲಾಸ್’ನಿಂದ ವಿದ್ಯಾರ್ಥಿ ಹೊರಕ್ಕೆ

Follow Us

newsics.com
ಚಾಮರಾಜನಗರ: ಒಂದೇ ಕಂತಿನಲ್ಲಿ ಶಾಲಾ ಶುಲ್ಕ ಪಾವತಿಸಲಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಾಲೆಯ ವಿದ್ಯಾರ್ಥಿಯನ್ನು ಆನ್‌ಲೈನ್ ತರಗತಿಯಿಂದ ಕೈಬಿಟ್ಟಿರುವ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ.
ನಗರದ ಜೆಎಸ್‌ಎಸ್ ಪಬ್ಲಿಕ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿಯ ಯಶಸ್ ತಂದೆ ಮಹೇಶ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್ ಅವರಿಗೆ ಶುಕ್ರವಾರ ನಗರದಲ್ಲಿ ದೂರು ಸಲ್ಲಿಸಿದ್ದಾರೆ.
ತಮ್ಮ ಮಗ ಚಾಮರಾಜನಗರದ ಖಾಸಗಿ ಜೆಎಸ್‌ಎಸ್ ಪಬ್ಲಿಕ್ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಈ ಶೈಕ್ಷಣಿಕ ವರ್ಷದ ಶುಲ್ಕವನ್ನು ಎರಡು ಕಂತುಗಳಲ್ಲಿ ಪಾವತಿಸುವುದಾಗಿ ನಾನು ಮನವಿ ಮಾಡಿದ್ದೆ. ಆದರೆ ಶಾಲೆಯ ಪ್ರಾಂಶುಪಾಲ ಉಮೇಶ್ ಅವರು ಒಂದೇ ಕಂತಿನಲ್ಲಿ ಶುಲ್ಕ ಪಾವತಿಸಬೇಕು ಎಂದು ತಿಳಿಸಿದರು. ನನಗೆ ಒಂದೇ ಕಂತಿನಲ್ಲಿ ಪಾವತಿಸಲು ಸಾಧ್ಯವಾಗಲಿಲ್ಲ. ಈ ಕಾರಣ ನನ್ನ ಮಗನನ್ನು ಆನ್‌ಲೈನ್ ತರಗತಿಯಿಂದ ವಂಚಿಸಲಾಗಿದೆ. ಅಷ್ಟೇ ಅಲ್ಲ, ಆತನ ಅರ್ಧವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನೂ ತಡೆಹಿಡಿಯಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವ ಸುರೇಶ ಕುಮಾರ್ ಡಿಡಿಪಿಐ ಅವರಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಹೈಕೋರ್ಟ್ ಅನುಮತಿ

ಡಿ.1ರಿಂದ ವೈದ್ಯಕೀಯ ಕಾಲೇಜು ಆರಂಭ – ಕೆ. ಸುಧಾಕರ್

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!