Saturday, November 26, 2022

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪರೀಕ್ಷೆ ರದ್ದುಪಡಿಸಲು ವಿದ್ಯಾರ್ಥಿಗಳ ಒತ್ತಾಯ

Follow Us

newsics.com
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಿದ ಪದವಿ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪರೀಕ್ಷೆಗಳನ್ನು ರದ್ದುಮಾಡುವಂತೆ ಉನ್ನತ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಈ ಹಿಂದೆ ಪರೀಕ್ಷಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಉನ್ನತ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದರು. ಹೀಗಾಗಿ ಪದವಿಯ 1, 3 ಮತ್ತು 5ನೇ ಸೆಮಿಸ್ಟರ್ ಪರಿಕ್ಷೆಗಳು ನಡೆದಿಲ್ಲ. ಆದರೆ, ಪರೀಕ್ಷೆ ನಡೆಸದೆಯೇ 2, 4 ಮತ್ತು 6ನೇ ಸೆಮಿಸ್ಟರ್ ತರಗತಿ ಪ್ರಾರಂಭಕ್ಕೆ ಅವಕಾಶ ನೀಡಲಾಗಿದೆ.
ಇದೀಗ ಉನ್ನತ ಶಿಕ್ಷಣ ಇಲಾಖೆ ಕೋವಿಡ್ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳ ಕೊನೆಯ ವಾರ ಅಥವಾ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಹೀಗಾಗಿ ಎರಡೆರೆಡು ಸೆಮಿಸ್ಟರ್ ಪರೀಕ್ಷೆಗಳು ಏಕಕಾಲಕ್ಕೆ ಬರುತ್ತವೆ. ಅದು ವಿದ್ಯಾರ್ಥಿಗಳಿಗೆ ಹೆಚ್ಚಿನ ಒತ್ತಡ ಉಂಟುಮಾಡಲಿದೆ. ಆದ್ದರಿಂದ 1, 3 ಮತ್ತು 5ನೇ ಸೆಮಿಸ್ಟರ್​ ಪರೀಕ್ಷೆಗಳು ರದ್ದುಪಡಿಸುವಂತೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ.
ಇದರೊಂದಿಗೆ ಈಗಿನ ಸೆಮಿಸ್ಟರ್ ಗಳ ಆನ್ಲೈನ್ ತರಗತಿಗಳು ನಡೆಯುತ್ತಿದ್ದು, ಇದನ್ನೂ ಆಫ್​ಲೈನ್ ಪರೀಕ್ಷೆಗಾಗಿ ಓದಿ, ಹಿಂದಿನ ಸೆಮಿಸ್ಟರ್ ವಿಷಯಗಳನ್ನೂ ಓದುವುದು ಒತ್ತಡ ಉಂಟುಮಾಡುತ್ತದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

 

‘ನೋಕ್ಕು ವಿದ್ಯೆ’ ಕಲೆಯ ಜೀವಂತಿಕೆಗೆ ಶ್ರಮಿಸುತ್ತಿರುವ ಕೇರಳದ ಯುವತಿ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!