Tuesday, July 5, 2022

ಯಶಸ್ವಿ ಶಸ್ತ್ರಚಿಕಿತ್ಸೆ: ಪ್ರಾಣಾಪಾಯದಿಂದ ಪಾರಾದ‌ ನಟ ದಿಗಂತ್

Follow Us

newsics.com
ಬೆಂಗಳೂರು: ಮಂಗಳವಾರ ರಾತ್ರಿ ಮೂರು ಗಂಟೆ ಕಾಲ ನಡೆಸಲಾದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಟ ದಿಗಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು‌ ಈ‌ ಮಾಹಿತಿ ನೀಡಿದ್ದು, ದಿಗಂತ್ ಅವರನ್ಜು ಈಗ ಆಸ್ಪತ್ರೆಯ‌ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ.

ದಿಗಂತ್ ಸ್ಪೋರ್ಟ್ಸ್ ಇಂಜುರಿಯಿಂದ ಬಳಲುತ್ತಿದ್ದಾರೆ. ಅವರ ಕುತ್ತಿಗೆ ಹಾಗೂ ಬೆನ್ನು ಮೂಳೆಗೆ ಬಲವಾದ ಪೆಟ್ಟು ಬಿದ್ದಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು‌ ವೈದ್ಯರು ತಿಳಿಸಿದ್ದಾರೆ.

ಕುಟುಂಬ ಸದಸ್ಯರೊಂದಿಗೆ ಗೋವಾಗೆ ಪ್ರವಾಸ ಹೋಗಿದ್ದ ದಿಗಂತ್, ಬೀಚ್ನಲ್ಲಿ ಸೋಮರ್ ಸಾಲ್ಟ್(ಬ್ಯಾಕ್ ಫ್ಲಿಪ್) ಮಾಡುವ ವೇಳೆ ಪೆಟ್ಟು ಮಾಡಿಕೊಂಡಿದ್ದರು. ಸದ್ಯ ನಟ ದಿಗಂತ್‌ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಿನ್ನೆ ರಾತ್ರಿ ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ದಿಗಂತ್ ಈಗ ವೈದ್ಯರ ಅಬ್ಸರ್ವೇಷನ್‌ನಲ್ಲಿದ್ದು, ಬುಧವಾರ ಬೆಳಗ್ಗೆ 10 ಗಂಟೆವರೆಗೂ ಅಬ್ಸರ್ವೇಷನ್‌ನಲ್ಲಿ ಇಡಲಾಗುತ್ತದೆ. ಬಳಿಕ ಹತ್ತು ಗಂಟೆಯ ಬಳಿಕ ಎರಡನೇ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಲಾಗುವುದು ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಜನ

ದೆಹಲಿಯಲ್ಲಿ ಇಂದು ಕಾಂಗ್ರೆಸ್ಸಿಗರ ಪ್ರತಿಭಟನೆ

ವಾಟ್ಸ್ ಆ್ಯಪ್ ಮೂಲಕ ಪೋಸ್ಟಲ್ ಬ್ಯಾಂಕ್ ಗೆ ಸಿದ್ಧತೆ

ಮತ್ತಷ್ಟು ಸುದ್ದಿಗಳು

vertical

Latest News

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

newsics.com ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
- Advertisement -
error: Content is protected !!