Monday, October 3, 2022

ಬೆಂಗಳೂರು ವಿವಿ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆ

Follow Us

newsics.com
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ಭಾನುವಾರ (ನ.8) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತ್ರಿಕೋದ್ಯಮ ವಿಭಾಗದ ಅಶೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಪ್ರೊಫೆಸರ್. ಮೈಕೋಲೇಔಟ್ ನ ಸಿಲ್ಕ್ ಬೋರ್ಡ್ ಮನೆಯಲ್ಲಿ ವಾಸವಾಗಿದ್ದ ಅವರು ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ. ಮೈಕೋಲೇಔಟ್ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಮೂಲತಃ ಶಿವಮೊಗ್ಗದವರಾಗಿರುವ ಅಶೋಕ್ ಕುಮಾರ್, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ನಂತರ ಬೆಂಗಳೂರಿನ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಅಶೋಕ್, ರಾತ್ರಿ ಹನ್ನೆರಡು ಗಂಟೆವರೆಗೂ ಪತ್ನಿ ಜತೆಗೆ ಮಾತನಾಡಿದ್ದರು. ಆದರೆ ಬೆಳಗ್ಗೆ 7 ಗಂಟೆಗೆ ಕೊಠಡಿ ಬಾಗಿಲು ತೆರೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಡೆತ್ ನೋಟ್ ನಲ್ಲಿ ಅಶೋಕ್ ಕುಮಾರ್. ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಬೆಂಗಳೂರಿನಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

ಕಚೇರಿ ವೇಳೆಯಲ್ಲೇ ಅರೆಬೆತ್ತಲೆ ಡ್ಯಾನ್ಸ್; 6 ಮೆಸ್ಕಾಂ ನೌಕರರು ಸಸ್ಪೆಂಡ್

ಮುಂಬೈಯ ಐದು ಪ್ರದೇಶಗಳಲ್ಲಿ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ದಾಳಿ

ಭಾರತಕ್ಕೆನುಸುಳಲು ಉಗ್ರರ ಯತ್ನ: ಓರ್ವ ಭಯೋತ್ಪಾದಕ ಗುಂಡಿಗೆ ಬಲಿ

ಸಾಧನೆಗೆ ಪ್ರೇರಣೆ ನೀಡುವ ಕಥೆಗಳ ಸಾರ ‘ನವಿಲುಗರಿ’

96 ಗಂಟೆಗಳ ಕಾರ್ಯಾಚರಣೆ ವಿಫಲ: ಹಾರಿ ಹೋಯ್ತು ಕೊಳವೆ ಬಾವಿಗೆ ಬಿದ್ದ ಮಗುವಿನ ಪ್ರಾಣ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!