ಬೆಂಗಳೂರು: ಸಂಸತ್ ಸದಸ್ಯೆ ಸುಮಲತಾ ಅಂಬರೀಷ್ ಕೊರೋನಾದಿಂದ ಗುಣಮುಖರಾಗಿದ್ದಾರೆ. ಮೂರು ವಾರಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದೇನೆ. ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು ನೆಗೆಟಿವ್ ವರದಿ ಬಂದಿದೆ ಎಂದು ಸುಮಲತಾ ಅವರು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದಾರೆ.
ಕೊರೋನಾ ಬಂದರೆ ಹೆದರಬೇಕಾಗಿಲ್ಲ ಎಂದು ಅವರು ಧೈರ್ಯ ತುಂಬಿದ್ದಾರೆ. ವೈದ್ಯರ ಸಲಹೆ ಮೇರೆಗೆ ನಾಲ್ಕು ವಾರ ವಿಶ್ರಾಂತಿ ಪಡೆದು ಜನಸೇವೆಗೆ ಮರಳುವುದಾಗಿ ಅವರು ಹೇಳಿದ್ದಾರೆ.