newsics.com
ನವದೆಹಲಿ: ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಹಲವು ಷರತ್ತುಗಳನ್ನು ವಿಧಿಸಿದೆ.
ಧಾರವಾಡ ಜಿಲ್ಲೆಗೆ ಪ್ರವೇಶ ಮಾಡಬಾರದು ಮತ್ತು ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂದು ಆದೇಶ ನೀಡಿದೆ. ಉಲ್ಲಂಘನೆಯಾದರೆ ಜಾಮೀನು ರದ್ದುಪಡಿಸುವ ಎಚ್ಚರಿಕೆ ನೀಡಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ವಿನಯ ಕುಲಕರ್ಣಿಯನ್ನು ಬಂಧಿಸಿತ್ತು.