newsics.com
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆಯಾಗಿದ್ದು, ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ ನೇಮಕಗೊಂಡಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್‌ನ ಸಂಘಟನಾ ಸಮಿತಿಗಳನ್ನು ಶುಕ್ರವಾರ ಪುನಾರಚಿಸಲಾಗಿದೆ.
ಎಐಸಿಸಿ ಪುನಾರಚನೆಗೊಂಡಿದ್ದು, ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ನೇಮಕವಾಗಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ದಿನೇಶ್ ಗುಂಡೂರಾವ್ ಗೆ ಪುದುಚೇರಿ, ತಮಿಳುನಾಡು ಹಾಗೂ ಗೋವಾ ರಾಜ್ಯಗಳ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ಉಸ್ತುವಾರಿಯಾಗಿ ಹೆಚ್ ಕೆ ಪಾಟೀಲ್ ನೇಮಕಗೊಂಡಿದ್ದಾರೆ. ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರಾಗಿ ಮುಂದುವರಿದಿದ್ದಾರೆ. ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರನ್ನೂ ಸಿಡಬ್ಲ್ಯುಸಿ ಕಾಯಂ ಆಹ್ವಾನಿತರಾಗಿ ಮುಂದುವರಿದಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂ ನಬಿ ಅಜಾದ್ ಕೈಬಿಡಲಾಗಿದೆ.