newsics.com
ಕೊಪ್ಪಳ: ತಾಲೂಕಿನ ಮೈಲಾಪುರ ಗ್ರಾಮದ ಬಿಜೆಪಿ ಅಭಿಮಾನಿಯೊಬ್ಬರು ತಮ್ಮ ಪುತ್ರಿಗೆ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಹೆಸರಿಡಲು ನಿರ್ಧರಿಸಿದ್ದಾರೆ.
ಈ ನಾಮಕರಣಕ್ಕೆ ಖುದ್ದಾಗಿ ಗಣಿ ಧಣಿ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಬಿ. ಶ್ರೀರಾಮಲು ನಡೆಸಬೇಕೆಂದು ಕಾಯುತ್ತಿದ್ದಾರೆ. ಮೈಲಾಪುರ ಗ್ರಾಮದ ಬಿ. ದೇವರಾಜ್ ಶಿವಣ್ಣನವರ್ ಮಗಳ ನಾಮಕರಣಕ್ಕೆ ಸಿದ್ಧತೆ ನಡೆಸಿದ್ದಾರೆ. ಶನಿವಾರಕ್ಕೆ ಮಗು ಜನಿಸಿ 10 ದಿನಗಳಾಗಿವೆ.
ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ವಿಶೇಷ ಅಭಿಮಾನಿಯಾಗಿರುವ ದೇವರಾಜ್ ದಂಪತಿಗೆ ಇತ್ತೀಚೆಗೆ ಹೆಣ್ಣು ಮಗು ಜನಿಸಿದೆ. ತಮ್ಮ ಮಗಳಿಗೆ ‘ಸುಷ್ಮಾ ಸ್ವರಾಜ್’ ಹೆಸರಿಡಲು ಸಿದ್ಧವಾಗಿರುವ ದಂಪತಿ, ಸಚಿವರು ಬರುವವರೆಗೂ ಮಗಳಿಗೆ ನಾಮಕರಣ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.