Saturday, April 17, 2021

ಒಂದು ವಾರ ಸದನದಿಂದ ಅಮಾನತು; ಅಂಗಿ ಬಿಚ್ಚಿದ ಸಂಗಮೇಶ್ ಆಕ್ರೋಶ

newsics.com
ಬೆಂಗಳೂರು: ವಿಧಾನಸಭೆ ಕಲಾಪ ವೇಳೆ ಅಂಗಿ ಬಿಚ್ಚಿ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರನ್ನು ಒಂದು ವಾರ ಸದನದಿಂದ ಅಮಾನತು ಮಾಡಲಾಗಿದೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂಗಮೇಶ್, ಇವರುಗಳು ಶ್ರೀರಾಮನ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಕೋಮು ದ್ವೇಷ ಹಬ್ಬುವ ಕೆಲಸ ಮಾಡುತ್ತಿದ್ದಾರೆ. ನನ್ನ ಮೇಲೆ ಕೊಲೆಯತ್ನ ಕೇಸು ದಾಖಲಿಸಿದ್ದಾರೆ. ನನ್ನ ಪುತ್ರ, ತಮ್ಮನ ಮೇಲೂ ಪ್ರಕರಣ ದಾಖಲಿಸಿದ್ದಾರೆ. ಇದನ್ನು ವಿರೋಧಿಸಿ ಸದನದಲ್ಲಿ ಶರ್ಟ್ ಬಿಚ್ಚಿ ಅಸಮಾಧಾನ ವ್ಯಕ್ತಪಡಿಸಿದೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಸ್ಪೀಕರ್ ನನಗೆ ಮಾತನಾಡಲು ಅವಕಾಶ ಕೊಡಬೇಕಿತ್ತು. ಅವರು ಪಕ್ಷಪಾತಿಯಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳಿದ್ದಾರೆ.
ಒಂದು ವಾರವಲ್ಲ ಇಡೀ ಸದನದ ಅವಧಿಗೆ ನನ್ನನ್ನು ಅಮಾನತು ಮಾಡಲಿ. ದಿನವೂ ನಾನು ಸದನಕ್ಕೆ ಬರುತ್ತೇನೆ ,ನ್ಯಾಯ ಕೇಳುತ್ತೇನೆ. ರಾಜ್ಯದಲ್ಲಿ ಗೂಂಡಾಗಿರಿ ನಡೆಯುತ್ತಿದೆ ಎಂದು ದೂರಿದರು.
ಭದ್ರಾವತಿಯಲ್ಲಿ ಬಿಜೆಪಿ ‌ನೆಲಕಚ್ಚಿದೆ. ಅಲ್ಲಿ 15 ವಿಧಾನಸಭಾ ಚುನಾವಣೆ ನಡೆದಿವೆ. ಇಲ್ಲಿವರೆಗೆ ಬಿಜೆಪಿ ತಳವೂರಲು ಸಾಧ್ಯವಾಗಿಲ್ಲ. ಅದಕ್ಕೆ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದರು.

ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಸಂಗಮೇಶ್

ನಕ್ಸಲೀಯರಿಂದ ನೆಲಬಾಂಬ್ ಸ್ಫೋಟ: ಹುತಾತ್ಮರಾದ ಮೂವರು ಯೋಧರು

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!