ಬೆಂಗಳೂರು: ನೂತನ ಶಾಸಕರ ಸಂಪುಟ ಸೇರ್ಪಡೆ ಸಮಾರಂಭಕ್ಕೆ ಬಿಜೆಪಿಯ ಹಲವು ಶಾಸಕರು ಮತ್ತು ಸಚಿವರು ಗೈರಾಗಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಈಶ್ವರಪ್ಪ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಅಲ್ಲದೇ ಕೇವಲ 20 ಶಾಸಕರು ಮಾತ್ರ ಈ ಸಮಾರಂಭಕ್ಕೆ ಹಾಜರಾಗಿದ್ದು, ಬಿಜೆಪಿ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ರವಾನಿಸಿದೆ. ಮುಂದಿನ ದಿನಗಳಲ್ಲಿ ಇದು ತೆಗೆದುಕೊಳ್ಳಲಿರುವ ತಿರುವು ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸಲಿದೆ.