newsics.com
ಬೆಳಗಾವಿ: ಟಾಟಾ ಏಸ್ ಹಾಗೂ ಬೊಲೆರೋ ವಾಹನ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ನಡೆದಿದೆ.
ಐವರು ಮಹಿಳೆಯರು ಹಾಗೂ ಓರ್ವ ಚಾಲಕ ಸೇರಿದಂತೆ ಒಟ್ಟು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದವರೆಂದು ತಿಳಿದುಬಂದಿದ್ದು, ಧಾರವಾಡದ ಮೊರಬ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ಹೋಗಿ ವಾಪಸ್ ಮರಳುವಾಗ ಈ ದುರಂತ ಸಂಭವಿಸಿದೆ.
ಟಾಟಾ ಏಸ್- ಬೊಲೆರೋ ಡಿಕ್ಕಿ; 7 ಮಂದಿ ಸಾವು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
Follow Us