Wednesday, October 5, 2022

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ

Follow Us

newsics.com
ಬೆಂಗಳೂರು: ರಾಜ್ಯ ಸರ್ಕಾರ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಿದೆ.
ಜಿಲ್ಲೆಯಿಂದ ಹೊರಗಡೆ ವರ್ಗಾವಣೆ ಆಗಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರಿಗೆ ಅವರು ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ಒಳಗೆ ಇರುವ ಖಾಲಿ ಹುದ್ದೆಗಳಿಗೆ ಅವರು ಬಯಸುವ ಅಕ್ಕಪಕ್ಕದ ತಾಲ್ಲೂಕುಗಳಲ್ಲಿ ಲಭ್ಯವಿರುವ ಹುದ್ದೆಗಳಿಗೆ ಸೀಮಿತವಾಗಿ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ನವೆಂಬರ್ 17 ರಂದು ಕಡ್ಡಾಯ, ಹೆಚ್ಚುವರಿಯಾಗಿ ತಾಲ್ಲೂಕಿನಿಂದ, ಜಿಲ್ಲೆಯಿಂದ ಹೊರಗೆ ವರ್ಗಾವಣೆಯಾಗಿರುವ ಶಿಕ್ಷಕರ ಪಟ್ಟಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ನವೆಂಬರ್ 20 ರಿಂದ 23 ರವರೆಗೆ ಶಿಕ್ಷಕರ ಆಕ್ಷೇಪಣೆ ಪರಿಶೀಲಿಸಿ ಅಂತಿಮಗೊಳಿಸಲಾಗುವುದು. ನವೆಂಬರ್ 24 ರಿಂದ 30 ರವರೆಗೆ ಪಟ್ಟಿಯಲ್ಲಿ ಪ್ರಕಟವಾಗಿರುವ ಆಸಕ್ತ ಶಿಕ್ಷಕರು ಆನ್ಲೈನ್’ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಡಿಸೆಂಬರ್ 1 ರಿಂದ 5 ರವರೆಗೆ ತಂತ್ರಾಂಶದಲ್ಲಿ ಅರ್ಜಿಗಳನ್ನು ಅಂತಿಮಗೊಳಿಸಲಾಗುವುದು.
ಡಿಸೆಂಬರ್ 14 ರಂದು ಅಂತಿಮ ಕೌನ್ಸೆಲಿಂಗ್ ಅರ್ಹತಾ ಪಟ್ಟಿ ಪ್ರಕಟಿಸಲಿದ್ದು, ಡಿಸೆಂಬರ್ 16 ಮತ್ತು 17 ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 18, 19ರಂದು ಪ್ರೌಢಶಾಲೆ ಶಿಕ್ಷಕರ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!