newsics.com
ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ, 13,363 ಅಭ್ಯರ್ಥಿಗಳು ಸ್ಥಾನಪಡೆದಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ನ.23ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಯಾ ಜಿಲ್ಲೆಗಳ ಉಪ ನಿರ್ದೇಶಕರ ಕಚೇರಿಯಲ್ಲಿ ನ.19ರಿಂದ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಆಕ್ಷೇಪಣೆ ಪೂರ್ಣಗೊಂಡ ಒಂದು ತಿಂಗಳಲ್ಲಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಈ ವರ್ಷದ ಮಾರ್ಚ್ನಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 68,849 ಅಭ್ಯರ್ಥಿಗಳು ಸಿಇಟಿ ಬರೆದಿದ್ದರು. ಅವರಲ್ಲಿ 51,098 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. 22,432 ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಆಯ್ಕೆ ಮಾಡಲಾಗಿತ್ತು. ಈಗ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ.