Monday, October 3, 2022

ಕಿರುತೆರೆ ನಟಿ ಚೇತನಾ ರಾಜ್ ಸಾವು: ಆಸ್ಪತ್ರೆಗೆ ಬೀಗ

Follow Us

newsics.com

ಬೆಂಗಳೂರು: ಕಿರುತೆರೆ ನಟಿ ಚೇತನಾ ರಾಜ್ ಸಾವಿಗೆ ಕಾರಣವಾದ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಹಾಕಲಾಗಿದೆ.
ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಆರೋಗ್ಯ ಇಲಾಖೆಯು ಡಾ.ಶೆಟ್ಟಿಗೆ ನೋಟಿಸ್ ನೀಡಲಾಗಿದೆ.
ಮಗಳ ಶಂಕಾಸ್ಪದ ಸಾವಿನ ಸಂಬಂಧ ಚೇತನಾ ತಂದೆ ವರದರಾಜ್ ನೀಡಿರುವ ದೂರಿನ ಅನ್ವಯ ಸುಬ್ರಹ್ಮಣ್ಯ ನಗರ ಪೊಲೀಸರು, ಆಸ್ಪತ್ರೆಯ ಸಾಹೇಬ್ ಗೌಡ ಶೆಟ್ಟಿ ಸೇರಿದಂತೆ ನಾಲ್ವರ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದಾರೆ.
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ನಟಿ ಚೇತನಾ ರಾಜ್ ಕೆಲ ದಿನಗಳ ಹಿಂದಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಅಬ್ಬಿಗೆರೆಯಲ್ಲಿ ವಾಸವಿರುವ ನಟಿಯ ಪೋಷಕರು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದರು.

ಗೃಹ, ವಾಣಿಜ್ಯ ಬಳಕೆ ಸಿಲಿಂಡರ್ ದರ ಮತ್ತೆ ಏರಿಕೆ

ಹೆಚ್ಚಿದ ಮಳೆಯ ಅಬ್ಬರ: ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಕಟ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!