Wednesday, October 5, 2022

ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಎನ್ ಐ ಎ ಯಿಂದ ಶಿರಸಿ ಯುವಕನ ಬಂಧನ

Follow Us

Newsics.com

ಶಿರಸಿ: ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಿರಸಿ ಮೂಲದ ಯುವಕನೊಬ್ಬನನ್ನು ಎನ್ ಐ ಎ ಬಂಧಿಸಿದೆ ಎಂದು ವರದಿಯಾಗಿದೆ.  ಶಿರಸಿ ತಾಲೂಕಿನ ಅರೆಕೊಪ್ಪ ನಿವಾಸಿಯಾಗಿರುವ ಯುವಕನನ್ನು ಎನ್ ಐ ಎ ಇದೀಗ ವಶಕ್ಕೆ ತೆಗೆದುಕೊಂಡಿದೆ.

ಎನ್ ಐ ಎ ಪಶ್ಚಿಮ ಬಂಗಾಳದ ದಳ ಈ ಕಾರ್ಯಾಚರಣೆ ನಡೆಸಿದೆ. ಬಂಧಿತ ಯುವಕನನ್ನು ಈ ಹಿಂದೆ ಮೂರು ಬಾರಿ ಎನ್ ಐ ಎ ವಿಚಾರಣೆ ನಡೆಸಿತ್ತು ಎಂದು ವರದಿಯಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಶಿರಸಿಯಂತಹ ಗ್ರಾಮೀಣ ಪ್ರದೇಶದಲ್ಲಿ ಈ ರೀತಿಯ ಚಟುವಟಿಕೆ ನಡೆದಿರುವುದು ಶಾಂತಿ ಪ್ರಿಯ ನಾಗರಿಕರಲ್ಲಿ ಆತಂಕ ಸೃಷ್ಟಿಸಿದೆ.  ಬಂಧಿತ ಆರೋಪಿಯಿಂದ ಮಹತ್ವದ ಮಾಹಿತಿ ದೊರೆಯುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!