newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಟ್ವಿಟರ್ ಮೂಲಕ ಈ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ನಾಗೇಶ್, ‘ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುವುದು’ ಎಂದು ಬರೆದುಕೊಂಡಿದ್ದಾರೆ.
ರಾಜ್ಯದಲ್ಲಿ 1ರಿಂದ 5ನೇ ತರಗತಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು 6ರಿಂದ 8ನೇ ತರಗತಿವರೆಗಿನ ಪ್ರಾಥಮಿಕ ಶಾಲೆ ಪದವೀಧರ ಶಿಕ್ಷಕ ಅಭ್ಯರ್ಥಿಗಳಿಗೆ ನಡೆದ ಈ ಪರೀಕ್ಷೆಗೆ ಒಟ್ಟು 3,32,913 ಮಂದಿ ಹಾಜರಾಗಿದ್ದರು.
ಒಟ್ಟಾರೆ 3.61 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ಈ ಅಭ್ಯರ್ಥಿಗಳಿಗೆ ರಾಜ್ಯದ 781 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಅರ್ಜಿ ಸಲ್ಲಿಸಿದವರ ಪೈಕಿ 28,471 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
https://twitter.com/BCNagesh_bjp/status/1600783905342517249?s=20&t=8YNWOIA7D_LmyJDZADIxGg