Monday, August 8, 2022

ಅ.5ರಿಂದ ಬೆಂಗಳೂರಿನ ಇಸ್ಕಾನ್ ಟೆಂಪಲ್ ಆರಂಭ

Follow Us

newsics.com
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಮುಚ್ಚಿದ್ದ ಬೆಂಗಳೂರಿನ ಇಸ್ಕಾನ್ ದೇವಾಲಯ ಅಕ್ಟೋಬರ್ 5 ರಿಂದ ತೆರೆಯಲಿದೆ.
ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ಮತ್ತು ಸಂಜೆ 4 ರಿಂದ 8ರವರೆಗೆ ತೆರೆದಿರಲಿದೆ. ವಾರಾಂತ್ಯದಲ್ಲಿ ಬೆಳಗ್ಗೆ 9.30ರಿಂದ ರಾತ್ರಿ 8 ರವರೆಗೂ ತೆರೆದಿರಲಿದೆ.
ದೇವಾಲಯಕ್ಕೆ ಬರುವವರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಹತ್ತು ವರ್ಷಕ್ಕಿಂತ ಕಡಿಮೆ ಇರುವವರು ಹಾಗೂ 65ಕ್ಕಿಂತ ಹೆಚ್ಚು ವರ್ಷದವರು ದೇವಸ್ಥಾನಕ್ಕೆ ಬರುವಂತಿಲ್ಲ. ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ. ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ದೇವಸ್ಥಾನಗಳ ಬಾಗಿಲು ಮುಚ್ಚಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!