newsics.com
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿರುವ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್.ನಂಜುಂಡಯ್ಯ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದೆ.
ಯೆಸ್ ಬ್ಯಾಂಕ್ ಕೇಸ್; ಇಡಿಯಿಂದ 127 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಈ ಬಗ್ಗೆ ಜಾರಿ ನಿರ್ದೇಶನಾಲಯ ತನ್ನ ಅಧಿಕೃತ ಟ್ವಿಟರ್ ಅಕೌಂಟ್ನಲ್ಲಿ ಖಚಿತಪಡಿಸಿದೆ. ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿರುವ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.