Tuesday, April 13, 2021

ಸಚಿವರ ಹೇಳಿಕೆ ಸುಳ್ಳು, ರಾಜ್ಯದಲ್ಲಿ 196 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ 196 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ಈವರೆಗಿನ ದಾಖಲೆ ಸಂಖ್ಯೆಯಾಗಿದೆ.
ಆದರೆ ಸ್ವಲ್ಪ ಹೊತ್ತಿನ ಮೊದಲು ಸಚಿವ ಸುರೇಶ ಕುಮಾರ್ 130 ಜನರಿಗೆ ಸೋಂಕು ತಗುಲಿರುವುದಾಗಿ ಹಾಸನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, 196 ಜನರಿಗೆ ಸೋಂಕು ಪತ್ತೆಯಾಗಿದೆ.
ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1939 ಆಗಿದೆ. ಬೆಳಗಾವಿ, ಗದಗ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಕೊರೋನಾ ಸ್ಫೋಟವಾಗಿದೆ.
ಯಾದಗಿರಿಯಲ್ಲಿ 75 ಜನರಿಗೆ ಸೋಂಕು ಪತ್ತೆಯಾಗಿದೆ. ಉತ್ತರ ಕನ್ನಡದಲ್ಲಿ ಇಬ್ಬರಿಗೆ ಸೋಂಕು ದೃಢವಾಗಿದೆ. ಮಂಡ್ಯದಲ್ಲಿ 28, ಗದಗದಲ್ಲಿ 15, ಚಿಕ್ಕ ಬಳ್ಳಾಪುರದಲ್ಲಿ 20, ಬೆಂಗಳೂರಲ್ಲಿ 4 ಜನರಿಗೆ ಸೋಂಕು ತಗುಲಿದೆ.
ಬೆಳಗಾವಿ ಮತ್ತು ಉತ್ತರ ಕನ್ನಡದಲ್ಲಿ ಪತ್ತೆಯಾಗಿರುವ ಸೋಂಕಿತರು ಮಹಾರಾಷ್ಟ್ರದಿಂದ ಹಿಂದಿರುಗಿರುವವರು.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!