Tuesday, April 13, 2021

ಏಳು ಹೆಣ್ಣು ನವಿಲುಗಳ ಹತ್ಯೆ


ಚಿತ್ರದುರ್ಗ: ಏಳು ನವಿಲುಗಳಿಗೆ ವಿಷ ಹಾಕಿ ಕೊಂದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಚಿತ್ರದುರ್ಗದ ಜೋಗಿಮಟ್ಟಿ ಅರಣ್ಯ ಪ್ರದೇಶದ ಕಂದಾಯ ಜಮೀನುಗಳ ಬಳಿ ಆಹಾರ ಹುಡುಕಿ ಬಂದಿದ್ದ ಏಳು ಹೆಣ್ಣು ನವಿಲುಗಳು ಮನುಷ್ಯನ ಕ್ರೂರತೆಗೆ ಬಲಿಯಾಗಿವೆ.
ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿ ನಿತ್ಯವೂ ಸಾವಿರಾರು ನವಿಲುಗಳು ಆಹಾರ ಅರಸಿ ಸಂಚಾರ ಮಾಡುತ್ತವೆ. ಇದನ್ನ ಕಂಡು ಸಹಿಸದ ಯಾರೋ ಕ್ರೂರಿಗಳು ವಿಷ ಆಹಾರ ಹಾಕಿ ಕೊಂದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಲಯಾರಣ್ಯಾಧಿಕಾರಿ ಸಂದೀಪ್ ನಾಯಕ್ ಸ್ಥಳಕ್ಕೆ ಸಿಬ್ಬಂದಿಗಳ ಜೊತೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ನವಿಲುಗಳ ಮೃತದೇಹಗಳನ್ನ ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿಕೊಟ್ಟಿದ್ದಾರೆ.
ಉದ್ದೇಶ ಪೂರ್ವಕವಾಗಿ ಹೀಗೆ ಮಾಡಿದ್ದಾರಾ ಎಂಬದು ಖಚಿತವಾದರೆ ತಪ್ಪಿತಸ್ಥರನ್ನು ಹುಡುಕಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಉಪ ವಲಯಾರಣ್ಯಾಧಿಕಾರಿ ರಾಘವೇಂದ್ರ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!