Tuesday, April 13, 2021

ಸರ್ಕಾರದ ನಿರ್ಲಕ್ಷ್ಯದಿಂದ ಹೆಚ್ಚಾಯಿತೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರನೆ ಭಾರಿ ಹೆಚ್ಚಳವಾಗಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಲಾಕ್ ಡೌನ್ ನಿರ್ಬಂಧ ಸಡಿಲಿಕೆ ನೆಪದಲ್ಲಿ ಹಾಗೂ ಆರ್ಥಿಕ ಸುಸ್ಥಿರತೆ ಸಾಧಿಸುವ ನಿಟ್ಟಿನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಯಿತು. ಹೀಗಾಗಿ‌ ಮನೆಯಲ್ಲಿದ್ದ‌ ಪಾನಪ್ರಿಯರೆಲ್ಲ ಬೀದಿಗೆ ಬಂದರು. ಸಾಮಾಜಿಕ ಅಂತರ ಮರೆತರು.

ಇನ್ನು, ವಲಸೆ ಕಾರ್ಮಿಕರ ವಿಷಯದಲ್ಲಿ ಸರ್ಕಾರ ಎಡವಿತಾ ಎಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೆ ಲಕ್ಷಾಂತರ ಕಾರ್ಮಿಕರ ಪ್ರವಾಸಕ್ಕೆ ಅವಕಾಶ ಕಲ್ಪಿಸಲಾಯಿತು ಎಂಬ ಆರೋಪ ಕೇಳಿ ಬಂದಿದೆ. ಇದರಿಂದಾಗಿ ಜಿಲ್ಲಾ ಕೇಂದ್ರಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ ಎಂದು ಹೇಳಲಾಗುತ್ತಿದೆ.

ಲಾಕ್ ಡೌನ್ ನಿಯಮ ಸಡಿಲಿಕೆಯಿಂದಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದ್ದಾರೆ. ಅನಗತ್ಯ ಕಾರ್ಯಗಳಿಗೆ ರಸ್ತೆಗಿಳಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ಸಾಮಾಜಿಕ ಅಂತರ ಎಂಬ ಪದಕ್ಕೆ ಹಲವೆಡೆ ಅರ್ಥವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಂಟೇನ್ ಮೆಂಟ್ ವಲಯಗಳಲ್ಲಿ ಜನರ ಸಂಚಾರಕ್ಕೆ ಕಠಿಣ ನಿರ್ಬಂಧ ವಿಧಿಸಲು ವಿಫಲವಾಗಿರುವುದು ಕೂಡ ರೋಗ ವ್ಯಾಪಕವಾಗಿ ಹರಡಲು ಕಾರಣವಾಯಿತು ಎಂಬ ಮಾತು ಕೇಳಿಬರುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!