Saturday, April 17, 2021

ಏಳನೇ ತರಗತಿವರೆಗಿನ ಆನ್ಲೈನ್ ತರಗತಿಯೂ ರದ್ದು

ಬೆಂಗಳೂರು: ಏಳನೇ ತರಗತಿವರೆಗೂ ಆನ್ಲೈನ್ ತರಗತಿಗಳನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಬುಧವಾರ ಎಲ್ಕೆಜಿ, ಯುಕೆಜಿ ಸೇರಿ ಐದನೇ ತರಗತಿವರೆಗಿನ ಆನ್ಲೈನ್ ತರಗತಿಗಳನ್ನು ರದ್ದುಪಡಿಸಿದ್ದ ಸರ್ಕಾರ, ಗುರುವಾರ ಏಳನೇ ತರಗತಿವರೆಗಿನ ಆನ್ಲೈನ್ ತರಗತಿಗಳನ್ನು ರದ್ದುಪಡಿಸಿದೆ ಎಂದು ಮಾಧುಸ್ವಾಮಿ ವಿಧಾನಸೌಧದಲ್ಲಿ ತಿಳಿಸಿದರು. ಬುಧವಾರವಷ್ಟೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ ನಂತರ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದರು. ಇಂದು ಅದನ್ನು 7ನೇ ತರಗತಿವರೆಗೂ ಸರ್ಕಾರ ವಿಸ್ತರಿಸಿದೆ. ಇನ್ನು ಶುಲ್ಕಕ್ಕಾಗಿ ಪೋಷಕರನ್ನು ಒತ್ತಾಯಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!