newsics.com
ಬೆಂಗಳೂರು: ವಿಮಾನವೊಂದರ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ಈ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನದ ಮುಂದಿನ ವ್ಹೀಲ್ ಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಗಳು ಎಮರ್ಜೆನ್ಸಿ ಘೋಷಿಸಿದ್ದಾರೆ.
ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಟ ನಡೆಸಿದೆ. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಇಂಧನ ಖಾಲಿಯಾದ ಬಳಿಕ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಈ ಲುಫ್ತಾನ್ಸಾ ವಿಮಾನದಲ್ಲಿ ಒಟ್ಟು 78 ಪ್ರಯಾಣಿಕರಿದ್ದರು.