Saturday, April 17, 2021

ರಾಜ್ಯದಲ್ಲಿ ಕ್ವಾರೆಂಟೈನ್ ಅವಧಿ ಏಳು ದಿನಕ್ಕೆ ಇಳಿಕೆ

ಬೆಂಗಳೂರು: ಕೇಂದ್ರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಕ್ವಾರೆಂಟೈನ್ ಅವಧಿಯನ್ನು 7 ದಿನಕ್ಕೆ ಇಳಿಕೆ ಮಾಡಲಾಗಿದೆ.
ಏಳು ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಗಾದ ಬಳಿಕ ಸೋಂಕಿನ ಲಕ್ಷಣಗಳು ಕಂಡುಬರದಿದ್ದಲ್ಲಿ ಅಂತಹ ವ್ಯಕ್ತಿಗಳನ್ನು ಹೋಂ ಕ್ವಾರೆಂಟೈನ್ ಗೆ ಒಳಪಡಿಸಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಹೊರ ರಾಜ್ಯ, ಹೊರ ದೇಶಗಳಿಂದ ಲಕ್ಷಾಂತರ ಮಂದಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ಆಗಮಿಸುತ್ತಿದ್ದು, ಸಾಂಸ್ಥಿಕ ಕ್ವಾರೆಂಟೈನ್ ಮಾಡುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹ ತನ್ನ ಮಾರ್ಗಸೂಚಿಯಲ್ಲಿ ಮಾರ್ಪಾಡು ಮಾಡಿದ್ದು, ಸಾಂಸ್ಥಿಕ ಕ್ವಾರೆಂಟೈನ್ ಅವಧಿಯನ್ನು ಶೇ.50ರಷ್ಟು ಕಡಿಮೆ ಮಾಡಿದೆ.
60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗ, ಶ್ವಾಸಕೋಶ ಸಮಸ್ಯೆಗಳಿದ್ದಲ್ಲಿ ಅಂತಹವರನ್ನು ಸಹ ಹೋಂ ಕ್ವಾರೆಂಟೈನ್ ಗೆ ಒಳಪಡಿಸಬಹುದು. ಹೋಂ ಕ್ವಾರೆಂಟೈನ್ ಗೆ ಒಳಪಡುವವರು ಕಡ್ಡಾಯವಾಗಿ ಮನೆಯಲ್ಲಿಯೇ ಇರಬೇಕು., ಜತೆಗೆ ಕೈಗೆ ಮುದ್ರೆ ಒತ್ತಿ ಕಳುಹಿಸಬೇಕು. ಕ್ವಾರೆಂಟೈನ್ ವಾಚ್ ಆ್ಯಪ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಸಹ ಕಡ್ಡಾಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!