Wednesday, July 6, 2022

ರಾಜ್ಯ ಸಚಿವ ಸಂಪುಟ ಶೀಘ್ರ ವಿಸ್ತರಣೆ

Follow Us

ಸುಳ್ಯ (ದಕ್ಷಿಣ ಕನ್ನಡ): ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟಕ್ಕೆ ಹೊಸದಾಗಿ ಮೂವರನ್ನು ಸೇರಿಸಿಕೊಳ್ಳಲಾಗುವುದು ಎಂದರು.
ಈ ಬಾರಿ ಸಂಪುಟ ಪುನಾರಚನೆ ಆಗುವ ಸಾಧ್ಯತೆಯಿಲ್ಲ. ಮೂರು ಸ್ಥಾನಗಳನ್ನು ಭರ್ತಿ ಮಾಡಲಷ್ಟೇ ಸಂಪುಟ ವಿಸ್ತರಣೆ ಸೀಮಿತವಾಗಿರುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳು ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಶಾಸಕ ಎಸ್. ಅಂಗಾರರಿಗೆ ಮಂತ್ರಿ ಸ್ಥಾನ ನೀಡಲು ತಾವು ಯತ್ನಿಸುತ್ತಿರುವುದಾಗಿಯೂ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದು,
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ಪರಮಾಧಿಕಾರ. ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!