newsics.com
ಮಡಿಕೇರಿ: ಕೊರೋನಾಗೆ ಲಸಿಕೆ ಲಭ್ಯವಾಗುವವರೆಗೆ ಶಾಲೆಗಳನ್ನು ತೆರೆಯದಿರಲು ಕೊಡಗು ಜಿಲ್ಲಾ ಪಂಚಾಯಿತಿ ನಿರ್ಣಯ ಕೈಗೊಂಡಿದೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿ, ಕೊರೋನಾ ಲಸಿಕೆ ಲಭ್ಯವಾಗುವವರೆಗೆ ಶಾಲೆಗಳನ್ನು ಆರಂಭಿಸದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಈ ನಿರ್ಣಯವನ್ನು ಸರ್ಕಾರಕ್ಕೆ ಕಳುಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಚಳಿಗಾಲ ಆರಂಭವಾದ ನಂತರದಲ್ಲಿ ವಾತಾವರಣದಲ್ಲಿ ಬದಲಾವಣೆಯಾಗಿ ಸೋಂಕು ಹೆಚ್ಚಳವಾಗಬಹುದು. ಇಂತಹ ಸಂದರ್ಭದಲ್ಲಿ ಶಾಲೆ ಆರಂಭಿಸಿದರೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಕೊರೋನಾ ಲಸಿಕೆ ಸಿಗುವವರೆಗೆ ಶಾಲೆಗಳನ್ನು ತೆರೆದಿಯಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಕೊರೋನಾಗೆ ಲಸಿಕೆ ಸಿಗುವವರೆಗೂ ಕೊಡಗಲ್ಲಿ ಶಾಲೆ ಆರಂಭವಿಲ್ಲ
Follow Us