Saturday, November 26, 2022

ಕಲ್ಲಿನಿಂದ ಹೊಡೆದು ಯುವ ಪ್ರೇಮಿಗಳಿಬ್ಬರ ಮರ್ಯಾದಾ ಹತ್ಯೆ, ಯುವತಿಯ ತಂದೆಯಿಂದಲೇ ಕೃತ್ಯ

Follow Us

newsics.com

ವಿಜಯಪುರ: ಬೇರೆ ಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತಂದೆಯೇ ಮಗಳು ಹಾಗೂ ಆಕೆಯ ಪ್ರಿಯಕರನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಸಲಾದಹಳ್ಳಿಯ ಬಸವರಾಜ ಮಡಿವಾಳಪ್ಪ ಬಡಿಗೇರಿ (19), ಖಾನಾಪುರದ ದವಲಬಿ ಬಂದಗಿಸಾಬ್ ತಂಬದ (18) ಮರ್ಯಾದಾ ಹತ್ಯೆಗೆ ಬಲಿಯಾದ ಪ್ರೇಮಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯವರ ವಿರೋಧದ ನಡುವೆಯೂ ಯುವ ಪ್ರೇಮಿಗಳು ಮಂಗಳವಾರ ಮಧ್ಯಾಹ್ನ ಹೊಲದಲ್ಲಿ ಭೇಟಿಯಾಗಿದ್ದರು. ಈ ವೇಳೆಯಲ್ಲೇ ಯುವತಿಯ ತಂದೆ ಅಲ್ಲಿಗೆ ಬಂದಿದ್ದು, ಇಬ್ಬರನ್ನೂ ಕಲ್ಲು ಹಾಗೂ ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ದವಲಬಿ ತಂಬದ ದಲಿತ ಸಮುದಾಯಕ್ಕೆ ಸೇರಿದ ಬಸವರಾಜ ಎಂಬ ಯುವಕನನ್ನು ಪ್ರೀತಿಸಿದ್ದೇ ಇಬ್ಬರ ಮರ್ಯಾದಾ ಹತ್ಯೆಗೆ ಕಾರಣ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!