newsics.com
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುಡುಕ, ದೊಡ್ಡ ಸ್ಕ್ಯಾಮ್, ಕಲೆಕ್ಷನ್ ಗಿರಾಕಿ ಎಂದು ಕಾಂಗ್ರೆಸ್ ನಾಯಕರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಮಾತನಾಡಿಕೊಳ್ಳುತ್ತಿರುವ ವಿಡಿಯೊ ವೈರಲ್ ಆಗಿ, ಈ ಇಬ್ಬರೂ ಮುಖಂಡರನ್ನು ಅಮಾನತುಗೊಳಿಸಿದ ಬಳಿಕವೂ ವಿವಾದ ತಣ್ಣಗಾಗಿಲ್ಲ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಿಜೆಪಿ ಕಾಂಗ್ರೆಸ್ ಅನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಮಾತನಾಡಿಕೊಂಡಿದ್ದಾರೆ ಎನ್ನಲಾದ ವಿಡಿಯೋವನ್ನು ಲಗತ್ತಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ‘ಕೈ’ ನಾಯಕರನ್ನು ತೀವ್ರವಾಗಿ ಟೀಕಿಸಿದೆ.
ಉಗ್ರಪ್ಪ ಅವರು ದೂರು ನೀಡಿದರೆ ತನಿಖೆ ನಡೆಸುವುದಾಗಿ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಉಪ ಚುನಾವಣೆ ಹೊಸ್ತಿಲಲ್ಲಿ ಈ ವಿಡಿಯೋ ಈಗ ಕಾಂಗ್ರೆಸ್ ಪಾಲಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.
ಬೆಂಗಳೂರಿನಲ್ಲಿ ಸ್ಥಳೀಯ ಹಕ್ಕಿಗಳ ಸಂಖ್ಯೆ ಹೆಚ್ಚಳ , ವಲಸೆ ಹಕ್ಕಿ ಕಣ್ಮರೆ