Wednesday, November 29, 2023

ರಂಗಕರ್ಮಿ ನಂಜುಂಡಸ್ವಾಮಿ ನಿಧನ

Follow Us

newsics.com
ಬೆಂಗಳೂರು: ರಂಗಭೂಮಿಯ ವಿವಿಧ ವಲಯಗಳಲ್ಲಿ ಕ್ರಿಯಾಶೀಲರಾಗಿದ್ದ ರಂಗಕರ್ಮಿ ತೋ.ನಂ. ನಂಜುಂಡಸ್ವಾಮಿ (71) ಅವರು ಮಂಗಳವಾರ ನಿಧನರಾದರು.
ಅವರು ಹೃದಯ ಹಾಗೂ ಯಕೃತ್ತು ಸಮಸ್ಯೆಯಿಂದ ಬಳಲುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ಹತ್ತು ದಿನಗಳಿಂದ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರಿಗೆ ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಮರಿಯಪ್ಪನ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನದ ಬಳಿಕ ಬಂಡೇಮಠ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ರಂಗಚೇತನ ಸಾಂಸ್ಕೃತಿಕ ತಂಡದ ಮೂಲಕ ನಂಜುಂಡಸ್ವಾಮಿ ಗುರುತಿಸಿಕೊಂಡಿದ್ದರು. ನಾಟಕ ರಚನೆ, ನಿರ್ದೇಶನ, ರಂಗ ಸಂಘಟನೆಗಳಲ್ಲಿ ತೊಡಗಿಕೊಳ್ಳುವ ಜತೆಗೆ ಗ್ರಾಮೀಣ ರಂಗಭೂಮಿಯ ಬೆಳವಣಿಗೆಗೆ ಕೊಡುಗೆ ನೀಡಿದ್ದರು. ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಬೆಂಗಳೂರು ರಂಗ ಕಲಾವಿದರ ವಿವಿಧೋದ್ದೇಶ ಸಹಕಾರ ಸಂಘದ ಸ್ಥಾಪಕರಾಗಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!