newsics.com
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಆಗಲಿ ಅಥವಾ ವೀಕೆಂಡ್ ಕರ್ಫ್ಯೂ ಬೇಡ, ಮುಂದಿನ ಎರಡು ವಾರ ಈಗ ಜಾರಿಯಲ್ಲಿರುವ ಕೋವಿಡ್ ನಿಯಮಗಳನ್ನೇ ಮುಂದುವರಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳ ಜಾರಿ ಕುರಿತಂತೆ ತಜ್ಞರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸದ ಬಳಿಕ ಹೇಳಿದ್ದಾರೆ. ಕೊರೋನಾ 2ನೇ ಅಲೆ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ, ಸೋಂಕು ಹೆಚ್ಚು ಇರುವ ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭಿಸುವಂತೆ ತಿಳಿಸಿದ್ದಾರೆ.
ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ: ಸಿಎಂ ಬೊಮ್ಮಾಯಿ