Wednesday, October 5, 2022

ನ.11ರಿಂದ 3 ದಿನಗಳ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ

Follow Us

NEWSICS.COM

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ನ.11, 12 ಮತ್ತು 13ರಂದು ರಾಜ್ಯ ಮಟ್ಟದ ಕೃಷಿ ಮೇಳವನ್ನು ಜಿಕೆವಿಕೆ ಆವರಣದಲ್ಲಿ ಆಯೋಜಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ಪ್ರತಿದಿನ 200 ಮಂದಿಗೆ ಮಾತ್ರ ಕೃಷಿತಾಕುಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ.

ಎಲ್ಲ ಕೃಷಿಕರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕೃಷಿ ವಿಜ್ಞಾನ ಕೇಂದ್ರಗಳು, ಸಂಶೋಧನಾ ಕೇಂದ್ರ ಗಳು, ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್, ಇನ್ಸ್ಟಾಗ್ರಾಂ ಮತ್ತು ವಿಶ್ವವಿದ್ಯಾಲಯದ ವೆಬ್ಸೈಟ್ ಗಳಲ್ಲಿ ನೇರ ಪ್ರಸಾರ ಮಾಡಲಾಗುವುದು. ಆಯಾ ಭಾಗದ ಕೃಷಿಕರು ತಮ್ಮ ಪ್ರಶ್ನೆಗಳನ್ನು ವಾಟ್ಸಾಪ್ ಮುಖಾಂತರ ಕೇಳಬಹುದು ಎಂದು ಕುಲಪತಿ ಡಾ. ಎಸ್ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಭೇಟಿ ನೀಡುವವರಿಗೆ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿದೆ. 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಪ್ರವೇಶ ಇಲ್ಲ ಎಂದಿದ್ದಾರೆ.
ಮೇಳದಲ್ಲಿ 17 ಹೊಸ ತಳಿಗಳ ಮತ್ತು ಹೊಸ ತಂತ್ರಜ್ಞಾನಗಳ ಬಿಡುಗಡೆ ಹಾಗೂ ಕೃಷಿ ಸಾಧಕರಿಗೆ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!