Saturday, November 27, 2021

24 ಗಂಟೆಯಲ್ಲಿ ಮೂವರ ಸಾವು, 12 ಮಂದಿಗೆ ಸೋಂಕು

Follow Us

ಬೆಂಗಳೂರು: ರಾಜ್ಯದಲ್ಲಿ ಶನಿವಾರ 12 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 601ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆವರೆಗೆ ಮೂವರು ಕೊರೋನಾಗೆ ಬಲಿಯಾಗಿದ್ದಾರೆ. ದಾವಣಗೆರೆ, ಬೀದರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಕೊರೋನಾಗೆ ಈವರೆಗೆ 25 ಜನ ಬಲಿಯಾದಂತಾಗಿದೆ.
ವಿಜಯಪುರ, ತುಮಕೂರು ಜಿಲ್ಲೆಯಲ್ಲಿ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದರೆ, ಬೀದರ್, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆ, ಬೆಳಗಾವಿ ಹಾಗೂ ಬಾಗಲಕೋಟೆಯ ಜಮಖಂಡಿಯಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಬೆಳಕಿಗೆ ಬಂದವು. ಇದೀಗ ಬೆಂಗಳೂರಿನಲ್ಲೇ ಹೊಸದಾಗಿ 3 ಪ್ರಕರಣಗಳು ಪತ್ತೆಯಾಗಿವೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!